ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI Recruitment 2025)ವು ನಿರ್ದೇಶಕ ಹುದ್ದೆಗೆ ಖಾಲಿಯಿರುವ ಎರಡು ಹುದ್ದೆಗಳಿಗೆ ಅಧಿಸೂಚನೆಯನ್ನು UIDAI ಪ್ರಾಧಿಕಾರ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಮತ್ತು ಅಗತ್ಯ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನಿಗದಿತ ಕಾಲಾವಧಿಯೊಳಗೆ ಅರ್ಜಿ ಸಲ್ಲಿಸಬೇಕು.
ಹುದ್ದೆಯ ವಿವರ:
- ಹುದ್ದೆಯ ಹೆಸರು: ನಿರ್ದೇಶಕ
- ಒಟ್ಟು ಹುದ್ದೆಗಳು: 02
- ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ವಿದ್ಯಾರ್ಹತೆ:
UIDAI ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ಪದವಿ, ಸ್ನಾತಕೋತ್ತರ ಪದವಿ, ಬಿಇ ಅಥವಾ ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
24-05-2025 ರಂತೆ ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳಾಗಿರಬೇಕು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.
ವೇತನ ಶ್ರೇಣಿ:
ಮಾಸಿಕ ₹1,23,100 – ₹2,15,900/-
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಧಿಕೃತ ವೆಬ್‌ಸೈಟ್ https://uidai.gov.in/ ಗೆ ಭೇಟಿ ನೀಡಿ.
- UIDAI ನೇಮಕಾತಿ ವಿಭಾಗದಲ್ಲಿ ನಿರ್ದೇಶಕ ಹುದ್ದೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಕೊನೆಯ ದಿನಾಂಕವನ್ನು ಗಮನಿಸಿ, ತಪ್ಪುಗಳಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಿ:
ವಿಳಾಸ:
Director (HR), Unique Identification Authority of India,
Bangla Sahib Road, Behind Kali Mandir, Gole Market, New Delhi-110001
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ: 25-03-2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-05-2025
ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆಗಾಗಿ https://uidai.gov.in/ ಗೆ ಭೇಟಿ ನೀಡಿ.
Official Notification & Application Form: Click Here